ನವದೆಹಲಿ : ಸುಪ್ರೀಂಕೋರ್ಟ್ ಅನುಮತಿ ಪಡೆದು ಪ್ರತಿವರ್ಷ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ‘ಸುಪ್ರೀಂ’ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ ಎಂದರು.
ಮೇಕೆದಾಟು ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡುತ್ತೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದು ಹೇಳಿದರು.