![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದ ಪರಿಣಾಮ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾಗಿಗೊಂಡಿದ್ದಾರೆ. ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.