ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ.
ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.
ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಸಿಸಿಬಿ ಪೊಲೀಸರು ಇಂದು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂಬ ಶಂಕಿತ ಉಗ್ರರನ್ನು ಬಂಧಿಸಲಾಗಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಸಂಶವಿದೆ ಎಂದು ಹೇಳಿದ್ದಾರೆ.
ಇವರಿಗೆ ವಿದೇಶದಿಂದ ಫಂಡಿಂಗ್ ಕೂಡ ಆಗಿದೆ. ಶಂಕಿತರ ಬೆಂಗಳೂರನ್ನೇ ಟಾರ್ಗೆಟ್ ಮಾಡಿದ್ರೂ, ಉಗ್ರರ ಹಿಂದೆ ಯಾರಿದ್ದಾರೆ ಎಂಬುದು ತನಿಖೆ ಆಗಲಿದೆ. ಉಗ್ರರ ಪ್ಲ್ಯಾನ್ ವಿಫಲಗೊಳಿಸಲಾಗಿದೆ. ಎಲ್ ಇಟಿ ಉಗ್ರ ನಜೀರ್ ಇವರಿಗೆ ತರಬೇತಿ ನೀಡಿದ್ದ.ಸದ್ಯ 7 ಪಿಸ್ತೂಲ್ , ಹಲವಾರು ಸ್ಫೋಟಕ ವಸ್ತುಗಳು ಮತ್ತು ಇತರ ವಸ್ತುಗಳನ್ನು ಮತ್ತು ಅವರ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಬಂಧಿತ ಐವರು ಆರೋಪಿಗಳು 2017 ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು, ಅಲ್ಲಿ ಅವರು ಕೆಲವು ಭಯೋತ್ಪಾದಕರೊಂದಿಗೆ ಸಂಪರ್ಕಕ್ಕೆ ಬಂದರು ಮತ್ತು ಸ್ಫೋಟಕಗಳನ್ನು ನಿರ್ವಹಿಸುವ ಬಗ್ಗೆ ತರಬೇತಿ ಪಡೆದಿದ್ದರು ಎನ್ನಲಾಗಿದೆ.