ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು ಇದರಲ್ಲಿ 9 ತಿಂಗಳ ಗಂಡು ಮಗು ಸಹಜವಾಗಿ ಸಾವನ್ನಪ್ಪಿಲ್ಲ ಎಂದು ತಿಳಿದು ಬಂದಿದೆ.
ಇಷ್ಟು ದಿನ ಮಗು ಹಾಲಿಲ್ಲದೇ ಹಸಿವಿನಿಂದ ಸಾವನ್ನಪ್ಪಿದೆ ಎಂದೇ ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ಕತ್ತನ್ನು ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ತಾಯಿ ಸಿಂಧೂರಾಣಿಯೇ 9 ತಿಂಗಳ ಗಂಡುಮಗುವಿನ ಕುತ್ತಿಗೆಗೆ ಹಸಿರು ಬಣ್ಣದ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದಿದ್ದಾಳೆ. ಇದಾದ ಬಳಿಕ ತಾನು ನೇಣು ಬಿಗಿದುಕೊಂಡಿದ್ದಳು ಎಂದು ತಿಳಿದು ಬಂದಿದೆ. ಮಗುವಿನ ಕೊಲೆ ರಿಪೋರ್ಟ್ ಬಂದ ಹಿನ್ನಲೆ ಮತ್ತೊಂದು ಎಫ್ ಐ ಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಡೆತ್ನೋಟ್ನಲ್ಲಿ ಶಂಕರ್ ಮೇಲೆ ಹಲವು ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಶಂಕರ್ಗೆ ಸಂಬಂಧಿಸಿದ ಲ್ಯಾಪ್ಟಾಪ್ನ್ನು ವಶಕ್ಕೆ ಪಡೆಯಲಾಗಿದೆ. ಇದರ ಜೊತೆಯಲ್ಲಿ ಅಳಿಯಂದಿರ ಮೊಬೈಲ್ ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ. ಲ್ಯಾಪ್ಟಾಪ್ ಹಾಗೂ ಮೊಬೈಲ್ ರಿಟ್ರೀವ್ ಮಾಡಲು ಸಿಐಡಿ ಸೈಬರ್ ಸೆಲ್ ಎಕ್ಸ್ಪರ್ಟ್ ಮೂಲಕ ಪೊಲೀಸರು ಸಿದ್ಧತೆ ನಡೆಸಿದ್ದಾರೆ.