alex Certify ಬ್ಯಾಡರಹಳ್ಳಿ ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​….! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸ್ಫೋಟಕ ಮಾಹಿತಿ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಡರಹಳ್ಳಿ ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​….! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸ್ಫೋಟಕ ಮಾಹಿತಿ ಲಭ್ಯ

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ದೊರಕಿದೆ. ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು ಇದರಲ್ಲಿ 9 ತಿಂಗಳ ಗಂಡು ಮಗು ಸಹಜವಾಗಿ ಸಾವನ್ನಪ್ಪಿಲ್ಲ ಎಂದು ತಿಳಿದು ಬಂದಿದೆ.

ಇಷ್ಟು ದಿನ ಮಗು ಹಾಲಿಲ್ಲದೇ ಹಸಿವಿನಿಂದ ಸಾವನ್ನಪ್ಪಿದೆ ಎಂದೇ ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ಕತ್ತನ್ನು ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ತಾಯಿ ಸಿಂಧೂರಾಣಿಯೇ 9 ತಿಂಗಳ ಗಂಡುಮಗುವಿನ ಕುತ್ತಿಗೆಗೆ ಹಸಿರು ಬಣ್ಣದ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದಿದ್ದಾಳೆ. ಇದಾದ ಬಳಿಕ ತಾನು ನೇಣು ಬಿಗಿದುಕೊಂಡಿದ್ದಳು ಎಂದು ತಿಳಿದು ಬಂದಿದೆ. ಮಗುವಿನ ಕೊಲೆ ರಿಪೋರ್ಟ್ ಬಂದ ಹಿನ್ನಲೆ ಮತ್ತೊಂದು ಎಫ್ ಐ ಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಡೆತ್​ನೋಟ್​​ನಲ್ಲಿ ಶಂಕರ್​ ಮೇಲೆ ಹಲವು ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಶಂಕರ್​ಗೆ ಸಂಬಂಧಿಸಿದ ಲ್ಯಾಪ್​ಟಾಪ್​ನ್ನು ವಶಕ್ಕೆ ಪಡೆಯಲಾಗಿದೆ. ಇದರ ಜೊತೆಯಲ್ಲಿ ಅಳಿಯಂದಿರ ಮೊಬೈಲ್​ ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ. ಲ್ಯಾಪ್​ಟಾಪ್​ ಹಾಗೂ ಮೊಬೈಲ್​ ರಿಟ್ರೀವ್​ ಮಾಡಲು ಸಿಐಡಿ ಸೈಬರ್​ ಸೆಲ್​ ಎಕ್ಸ್​ಪರ್ಟ್​ ಮೂಲಕ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...