ಬೆಂಗಳೂರು: ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
ಕಾವೇರಿ ಐದನೇ ಹಂತದ ಯೋಜನೆ ಜಾರಿಯಾದ ಬಳಿಕ ಎಲೆಕ್ಟ್ರಿಕ್ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಬೇಕಿದೆ. ಹೀಗಾಗಿ ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220 ಕೆವಿ ವಿದ್ಯುತ್ ಉಪಕೇಂದ್ರಗಳನ್ನು ಅಕ್ಟೋಬರ್ 23 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ.
ಹೀಗಾಗಿ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲ ಮಂಡಳಿ ಪ್ರಕಟಣೆ ತಿಳಿಸಿದೆ.