ಬೆಂಗಳೂರು: ರಾಜಧಾನಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ತನಿಖೆ ನಡೆಸಲು ಡಿಸಿಪಿ ನೇತೃತ್ವದಲ್ಲಿ ಸಿಸಿಬಿ ಪೊಲೀಸರ ಎರಡು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ತನಿಖೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೂಚಿಸಿದ್ದಾರೆ.
ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಶಾಲೆಗಳಿಗೆ ಭೇಟಿ ನೀಡಿ ಪರುಶೀಲಿಸಲಾಗಿದ್ದು, ಇದು ಹುಸಿ ಬಾಂಬ್ ಕರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕಳೆದ ಒಂದು ವರ್ಷದಿಂದ ಬೆಂಗಳೂರಿನ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಸೂಚಿಸಲಾಗಿದೆ.