BIG NEWS: ಬೈಕ್ ಸವಾರನ ಮೇಲೆ ಕಾರು ಹರಿಸಿ ಬರ್ಬರ ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಬೈಕ್ ಸವಾರನನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಆರೋಪಿ ಸ್ಕಾರ್ಪಿಯೋ ಎಸ್ ಯು ವಿಯಲ್ಲಿ ಬೈಕ್ ಸವಾರನನ್ನು ಹಿಂಬಾಲಿಸಿಕೊಂಡು ಬಂದು ಬೈಕ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಕಾರು ಹರಿಸಿ ಹತ್ಯೆ ಮಾಡಲಾಗಿದೆ.ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಅಸ್ಗರ್ ಮೃತ ವ್ಯಕ್ತಿ. ಪುಲಕೇಶಿ ನಗರದಲ್ಲಿ ಈ ಘಟನೆ ನಡೆದಿತ್ತು. ಹಣಕಾಸಿನ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿ ಅಮ್ರೀನ್ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read