alex Certify BIG NEWS: ಬೆಂಗಳೂರಿನಲ್ಲಿ ಚಿರತೆ ಕಾಟಕ್ಕೆ ಬ್ರೇಕ್ ಹಾಕಲು ಮಹತ್ವದ ಕ್ರಮ; ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಅರಣ್ಯ ಸಚಿವರ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಚಿರತೆ ಕಾಟಕ್ಕೆ ಬ್ರೇಕ್ ಹಾಕಲು ಮಹತ್ವದ ಕ್ರಮ; ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ವನ್ಯಮೃಗಗಳು ನಾಡಿಗೆ ಬಂದ ಕೂಡಲೇ ಅವುಗಳನ್ನು ತಕ್ಷಣ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಬೆಗಳೂರಿಗೆ ಪ್ರತ್ಯೇಕ ಕ್ಷಿಪ್ರ ಕಾರ್ಯಪಡೆ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಈ ಬಾರಿ ಮಳೆ ಕೊರತೆಯಿಂದಾಗಿ ವನ್ಯಮೃಗಗಳು ಹೆಚ್ಚಾಗಿ ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬರುತ್ತಿವೆ. ಬೆಂಗಳೂರಿನ ಹೊರವಲಯದಲ್ಲಿ ಬೆಟ್ಟ, ಕಾಡುಗಳಿರುವುದರಿಂದ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಹಾಗಾಗಿ ಕ್ಷಿಪ್ರ ಕಾರ್ಯಪಡೆ ರಚಿಸಿ ವನ್ಯಮೃಗಗಳನ್ನು ಕಾಡಿಗಟ್ಟುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಿರುವ 5 ಆನೆ ಕ್ಷಿಪ್ರ ಕಾರ್ಯಪಡೆಗಳ ಜೊತೆಗೆ ಬೆಂಗಳೂರಿನ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ 2 ಕಾರ್ಯಪಡೆಗಳನ್ನು ಹೆಚ್ಚುವರಿ ರಚಿಸಲಾಗಿದೆ. ಚಿರತೆ, ಕರಡಿಗಳಿರುವ ಪ್ರದೇಶಗಳಲ್ಲಿ 3 ಜಿಲ್ಲೆಗಳಿಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...