ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ಅವಘಡ ಘಟನೆಗಳು ಸಂಭವಿಸಿತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜಧಾನಿ ಬೆಂಗಳೂರಿನ ಶೂ ಹಾಗೂ ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಬಟೆಗಳು ಬೆಂಕಿಗಾಹುತಿಯಾಗಿವೆ.
ಚಿಕ್ಕಜಾಲಬಳಿ ಶೂ ಹಾಗೂ ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಹೊತ್ತಲ್ಲೇ ಇಡೀ ಮಳಿಗೆ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆ ಬೆನ್ನಲ್ಲೇ ಚಿಕ್ಕಮಗಳೂರಿನ ಕಡಹಿನಬೈಲು ಗ್ರಾಮದಲ್ಲಿಯೂ ಬೆಂಕಿ ಅವಘಡ ಸಂಭವಿಸಿದೆ. ಮನೆಯ ಮೇಲ್ಛಾವಣಿ, ರಬ್ಬರ್ ಶೀಟ್ ಬೆಂಕಿಗಾಹುತಿಯಾಗಿವೆ.
ಕುರಗುಂದದ ಜೋಸೆಫ್ ಎಂಬುವವರ ಮನೆಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು, ರಬ್ಬರ್, ಮನೆಯ ಮೇಲ್ಛಾವಣಿ ಸುಟ್ಟು ಕರಕಲಾಗಿದೆ. ಸುಮಾರು 1.50 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.