ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ ‘ಊಬರ್ ಗ್ರೀನ್’ ಪ್ರಾರಂಭವಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅರಮನೆ ಮೈದಾನದಲ್ಲಿ ಚಾಲನೆ ನೀಡಿದ್ದಾರೆ.
ಮಧ್ಯ ಬೆಂಗಳೂರು ಸೇರಿದಂತೆ ನಗರದ ವಿವಿಧ ಭಾಗಗಳಿಗೆ ಊಬರ್ ಗ್ರೀನ್ ಸೇವೆ ಲಭ್ಯವಿರಲಿದೆ. ಶೀಘ್ರದಲ್ಲಿಯೇ ಬೆಂಗಳೂರು ನಗರದಾದ್ಯಂತ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಊಬರ್ ಗ್ರೀನ್ ನಲ್ಲಿ ಪ್ರಯಾಣಿಸಲಿದ್ದಾರೆ. ಇದು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕ್ಯಾಬ್ ಅಗ್ರಿಗೇಟರ್ ಊಬರ್ ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವನ್ನು ಸುಧಾರಿಸುವುದು ನಮೆಲ್ಲರ ಜವಾಬ್ದಾರಿ ಈ ನಿಟ್ಟಿನಲ್ಲಿ ಊಬರ್ ಗ್ರೀನ್ ಕ್ರಮ ಅತ್ಯುತ್ತಮ ಹೆಜ್ಜೆ. ದೀರ್ಘಾವಧಿಯಲ್ಲಿ ಪರುಣಾಮಕಾರಿ ಹಾಗೂ ಅರ್ಥಪೂರ್ಣ ಬದಲಾವಣೆಗಳಿಗೆ ದಾರಿ ಮಾಡಿಕೊಡುವ ಸುಸ್ಥಿರತೆಯ ಸಂಸಕೃತಿ ಬೆಳೆಸುವ ನಿಟ್ಟಿನಲ್ಲಿ ಊಬರ್ ಗ್ರೀನ್ ಸ್ಪಷ್ಟವಾದ ಕ್ರಮವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.