alex Certify BIG NEWS: ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರು: ಮುಂಜಾನೆಯಿಂದ ಮೋಡಕವಿದ ವಾತಾವರಣವಿದ್ದ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.

ಸಂಜೆ ವೇಳೆ ದಿಢೀರ್ ಆರಂಭವಾದ ವರುಣಾರ್ಭಟಕ್ಕೆ ಹಲವೆಡೆ ರಸ್ತೆ ಮಾರ್ಗಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.

ಆರ್. ಆರ್. ನಗರ, ನಾಯಂಡಹಳ್ಳಿ,ಹೊಸಕೆರೆಹಳ್ಳಿ, ಗಿರಿನಗರ, ಮೈಸೂರು ರಸ್ತೆ, ರಾಜಾಜಿನಗರ, ವಿಜಯನಗರ ಸೇರಿದಂತೆ ಹಲವೆಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಾತ್ರಿ ವೇಳೆಗೆ ಇನ್ನಷ್ಟು ವರುಣಾರ್ಭಟ ಜೋರಾಗುವ ಸಾಧ್ಯತೆ ದಟ್ಟವಾಗಿದ್ದು, ಕಚೇರಿಂದ ಮನೆಗೆ ತೆರಳುವವರು ಮಳೆಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...