alex Certify BIG NEWS: ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಮುಂದಿನ ಕೆಲ ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಒಟ್ಟು 8 ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...