
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ ಹಲವೆಡೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಗಡಿ ರಸ್ತೆ, ಆಡೂಗೋಡಿ ಸೇರಿದಂತೆ ವಿವಿಧೆಡೆಗಳಲ್ಲಿ ತೆರಿಗೆ ಅಧಿಕರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳಿಂದ ಈ ದಾಳಿ ನಡೆದಿದೆ.