ಬೆಂಗಳೂರು: ರಸ್ತೆ ದಾಟುವಾಗ ಅದರಲ್ಲಿಯೂ ಬೆಂಗಳೂರಿನಂತಹ ನಗರಗಳಲ್ಲಿ ರಸ್ತೆ ಕ್ರಾಸ್ ಮಾಡುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸೂರು ರಸ್ತೆಯಲ್ಲಿ ನಡೆದಿದೆ.
ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಮಹಿಳೆಯರಿಬ್ಬರ ದೇಹ ಛಿದ್ರ ಛಿದ್ರವಾಗಿದೆ. ನಾರಾಯಣ ಹೃದಯಾಲಯ ಆಸ್ಪತ್ರೆಯ ಮುಂಭಾಗವೇ ಈ ದುರಂತ ಸಂಭವಿಸಿದೆ.
ವೈಟ್ ಫೀಲ್ಡ್ ನಿಂದ ಬಂದಿದ್ದ ಇಬ್ಬರು ಮಹಿಳೆಯರು ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಹರಿದು ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.