ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಯಲ್ಲಿ ಕಳೆದ ಮೂರು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿದೆ.
ಚಿರತೆ ಬಲಿಯಾಗಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಸಿಸಿಎಫ್ ಲಿಂಗರಾಜು, ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಎರಡು ಬಾರಿ ದಾಳಿ ನಡೆಸಿತ್ತು. ಚಿರತೆ ದಾಳಿಯಿಂದ ಡಾ.ಕಿರಣ್ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಗುಂಡೆಟಿಗೆ ಚಿರತೆ ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.
ಬನ್ನೇರುಘಟ್ಟ ಉದ್ಯಾನವನದ ಆಸ್ಪತ್ರೆಯಲ್ಲಿ ಚಿರತೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಚಿರತೆ ಮೃತಪಟ್ಟಿರುವುದು ದೃಢವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆಯಲ್ಲಿ ಇದಕ್ಕೆ ಅವಕಾಶವೂ ಇದೆ ಎಂದು ಮಾಹಿತಿ ನೀಡಿದ್ದಾರೆ.