ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೆಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿಯನ್ನು ಬಂಧಿಸಲು ಎಂಟು ತಂಡ ರಚಿಸಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುತ್ತದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೆಫೆ ಬಾಂಬ್ ಸ್ಪೋಟದ ಆರಫಿ ಪತ್ತೆಗಾಗಿ ಈಗಾಗಲೇ ಎಂಟು ತಂಡ ರಚನೆ ಮಾಡಲಾಗುತ್ತಿದ್ದು, ಎನ್ ಐಎ, ಐಬಿ, ಎನ್ ಎಸ್ ಜಿ ಪಡೆ ಕೂಡ ಸಹಕಾರ ನೀಡಿದೆ. ಹಲವು ತನಿಖಾ ಸಂಸ್ಥೆಗಳು ಘಟನಾ ಸ್ಥಳ ಪರಿಶೀಲನೆ ನಡೆಸಿವೆ ಎಂದು ತಿಳಿಸಿದ್ದಾರೆ.