![](https://kannadadunia.com/wp-content/uploads/2022/02/Electricity-Bill.jpg)
ದಾವಣಗೆರೆ: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗುತ್ತಿದ್ದು, ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.