ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪ ವಿಭಾಗಗಳ ಅಧಿಕಾರಿಗಳನ್ನು ಸಂಪರ್ಕಿಸಲು ಬೆಸ್ಕಾಂ ತಿಳಿಸಿದೆ.
ಸ್ಥಳೀಯ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾನುಸಾರ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ಉಪ ವಿಭಾಗಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ ಸಂಬಂಧಿತ(ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಸಕ್ಷಮ ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.
ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹ ಪ್ರತಿಷ್ಠಾಪಿಸಲು ನಿರ್ಮಿಸಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಳ್ಳಬೇಕು.
ವೈರಿಂಗ್ ಸುರಕ್ಷತೆ, ಎಂ.ಸಿ.ಬಿ. ಮತ್ತು ಇ.ಐ.ಎ. ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿ ಪಡೆದು ಸ್ಥಳ ಪರಿಶೀಲಿಸಿದ ನಂತರವೇ ಸಂಪರ್ಕ ಕಲ್ಪಿಸಲಾಗುವುದು.
ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.