ಬೆಂಗಳೂರು: ರಾಜ್ಯದಲ್ಲಿ 63 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಸ್ಕಾಂ ಹಿರಿಯ ಅಧಿಕಾರಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಸ್ಕಾಂ ಜಾಗೃತ ದಳದ ಡಿಜಿಎಂ ಟಿ.ಎನ್.ಸುಧಾಕರ ರೆಡ್ಡಿ ಅವರ ಬೆಂಗಳೂರಿನ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದೆಡೆ ಸುಧಾಕರ್ ರೆಡ್ಡಿ ಅವರ ಸಂಬಂಧಿಕರ ಮನೆ ಚಿಂತಾಮಣಿ ತಾಲೂಕಿನ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.
ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೃಷ್ಣಮೂರ್ತಿ, ಕುಂಬಳಗೋಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿಗಳ ಮನೆ ಮೇಲೂ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.