alex Certify Best Teacher Award 2023 : ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Best Teacher Award 2023 : ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : 2023 ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಉಪನ್ಯಾಸಕರು ಮುಖ್ಯ ಶಿಕ್ಷಕರು / ಪ್ರಾಂಶುಪಾಲರು

(https://nationalawardstoteachers.education.gov.in) ಮೂಲಕ ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ರಾಜ್ಯ ಸರ್ಕಾರದ, ರಾಜ್ಯ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮತ್ತು ರಾಜ್ಯ ಸರ್ಕಾರಕ್ಕೆ ರಾಜ್ಯ ಮಂಡಳಿಗೆ ಸಂಯೋಜನೆಗೊಂಡಿರುವ (ರಾಜ್ಯ ಸರ್ಕಾರದಿಂದ ನೋಂದಣಿ & ಮಾನ್ಯತೆ ಪಡೆದಿರುವ) ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿನ ಪದವಿ ಕಾಲೇಜುಗಳಲ್ಲಿನ ಖಾಯಂಗೊಂಡ ಮತ್ತು ಮನೆಪಾಠದಲ್ಲಿ ತೊಡಗಿಸಿಕೊಂಡಿರದ ಹಾಗೂ ಕನಿಷ್ಟ 10 ವರ್ಷಗಳ ಸೇವೆಯನ್ನು ಪೂರೈಸಿರುವ ಶಿಕ್ಷಕರು/ಉಪನ್ಯಾಸಕರು/ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರು ದಿನಾಂಕ:30-04-2023 ರವರೆಗೆ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮೇಲ್ಕಂಡ ಶಾಲೆಗಳ/ಪದವಿ ಪೂರ್ವ ಕಾಲೇಜುಗಳ ಖಾಯಂಗೊಂಡಿದ್ದ ಮತ್ತು ಮನೆಪಾಠದಲ್ಲಿ ತೊಡಗಿಸಿಕೊಂಡಿರದಿದ್ದ ಹಾಗೂ ಕನಿಷ್ಟ 10 ವರ್ಷಗಳ ಸೇವೆಯನ್ನು ಪೂರೈಸಿದ್ದ ಶಿಕ್ಷಕರು / ಉಪನ್ಯಾಸಕರು | ಮುಖ್ಯ ಶಿಕ್ಷಕರು/ ಪ್ರಾಂಶುಪಾಲರು.ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ – 2023 * ಪ್ರಶಸ್ತಿಗೆ ಆಯ್ಕೆಯಾಗ ಬಯಸಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಶೈಕ್ಷಣಿಕ ಆಡಳಿತಗಾರರು, ಶಿಕ್ಷಣ ಪರಿವೀಕ್ಷಕರು. ತರಬೇತಿ ಸಂಸ್ಥೆಗಳ ಸಿಬ್ಬಂದಿಗಳು, ಗುತ್ತಿಗೆ/ಶಿಕ್ಷಣಮಿತ್ರ/ಅರೆಕಾಲಿಕ/ಗೌರವ/ಅತಿಥಿ ಶಿಕ್ಷಕರು/ಉಪನ್ಯಾಸಕರು ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.ಅಂತರ್ಜಾಲ ತಾಣದ ಮೂಲಕ ಅಥವಾ ಶಾಲಾ ಶಿಕ್ಷಣ ಇಲಾಖೆಯ ಅಂತರ್ಜಾಲ ತಾಣ ಮೂಲಕ ಅರ್ಹ ಶಿಕ್ಷಕರು/ಉಪನ್ಯಾಸಕರು/ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ತಾವೇ ಸ್ವಯಃ (Self-nomination) ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿಗಳನ್ನುಸಲ್ಲಿಸಬೇಕಾಗಿರುತ್ತದೆ. . ಅರ್ಹ ಶಿಕ್ಷಕರು/ಉಪನ್ಯಾಸಕರು/ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ಅರ್ಜಿ ಸಲ್ಲಿಸುವ ಪೂರ್ವದಲ್ಲಿhttps://nationalawardstoteachers.education.gov.in ಅಂತರ್ಜಾಲ ತಾಣದಲ್ಲಿರುವ ತತ್ಸಂಬಂಧಿ ಸೂಚನೆಗಳನ್ನು ಓದಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...