ಧಾರವಾಡ: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಪುಣೆ -ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೊಂಕಣ ರೈಲ್ವೆ ಜಾಲ ಕೇರಳದಿಂದ ಮಹಾರಾಷ್ಟ್ರದವರೆಗೆ ವಿಸ್ತರಿಸಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಉತ್ತಮವಾದ ಸೇವೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಮಹಾರಾಷ್ಟ್ರ ಸರ್ಕಾರದೊಂದಿಗೂ ಚರ್ಚೆ ನಡೆಸಿ ವಿಲೀನ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.