ಬೀದರ್ : ರಾಜ್ಯದಲ್ಲಿ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಭಾಲ್ಕಿಯಲ್ಲಿ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಮಾತನಾಡಿದ ಸಚಿವರು ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಸುಮಾರು 7 ಕೋಟಿ ಸಸಿ ನೆಡುವ ಗುರಿ
ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಹೊದಿಕೆಯ ಕ್ರಾಂತಿ” ಮಾಡುವ ಮಹದುದ್ದೇಶದಿಂದ ಕಳೆದ 2023-24ನೇ ಸಾಲಿನಲ್ಲಿ ಸುಮಾರು 5.40 ಕೋಟಿ ನೆಟ್ಟು ಪೋಷಿಸಲಾಗಿದೆ ಈ ವರ್ಷವೂ ಸಹ ರಾಜ್ಯಾದ್ಯಂತ ಸುಮಾರು 7 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು.
ಮನೆಯಿಂದಲೇ ಆರಂಭವಾಗಲಿ ಪರಿಸರ ಸಂರಕ್ಷಣೆ
ಎಲ್ಲರಿಗೂ ‘ವಿಶ್ವ ಪರಿಸರ ದಿನ’ದ ಹಾರ್ದಿಕ ಶುಭಾಶಯಗಳು. ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರದೊಂದಿಗೆ ಸಮತೋಲನ, ಸಾಮರಸ್ಯ ಕಾಯ್ದುಕೊಳ್ಳುವುದು ಅತಿಮುಖ್ಯ. ಇದು ನಮ್ಮ ಕರ್ತವ್ಯ ಮಾತ್ರವಲ್ಲ, ನಮ್ಮ ಮುಂದಿನ ಪೀಳಿಗೆಯವರಿಗೆ ನಾವು ನೀಡಲೇಬೇಕಾದ ಬಳುವಳಿ. ಪರಿಸರವನ್ನು ಉಳಿಸೋಣ, ಹಸಿರನ್ನು ಬೆಳೆಸೋಣ ಎಂದರು.