ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಳೆದ 9 ತಿಂಗಳಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ನಾಗರಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಯಾರೇ ಫೋನ್ ಮೂಲಕ ಒಟಿಪಿ, ಬ್ಯಾಂಕ್ ವಿವರಗಳನ್ನು ಕೇಳಿದರೆ ಜಾಗ್ರತೆ ವಹಿಸಬೇಕು.
ರಾಜ್ಯ ಸರ್ಕಾರವು ಸೈಬರ್ ವಂಚನೆ ತಡೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಸೂಚನೆಗಳನ್ನು ನೀಡಿದೆ. ಹೀಗಾಗಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಈ ಕೆಳಗಿನ ಮಾಹಿತಿಗಳನ್ನು ಕೊಡಬಾರದು.
ಬ್ಯಾಂಕ್ ಖಾತೆ ವಿವರ
ಕ್ರೆಡಿಟ್ ಕಾರ್ಡ್ ನಂಬರ್
ಡೆಬಿಟ್ ಕಾರ್ಡ್ ನಂಬರ್
ಒಟಿಪಿ
ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಸೈಬರ್ ಅಪರಾಧಗಳ ಪ್ರಕರಣಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದೆ.
ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್ಸ್ಪೇರ್ ಸೆಂಟರ್ ಫಾರ್ ಎಕ್ಸ್ಲೆನ್ಸ್ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ.
ಸೈಬರ್ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಹಾಗೂ ತ್ವರಿತ ತನಿಖೆಗೆ ನೆರವಾಗುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲು ರಾಜಧಾನಿ ಬೆಂಗಳೂರಿನಲ್ಲಿ ‘ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಿದೆ. ಈ ಮೂಲಕ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.