alex Certify ಎಚ್ಚರ..! ಚುನಾವಣೆ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ..! ಚುನಾವಣೆ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ..!

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ; ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಏಪ್ರಿಲ್, 26 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಕೊಡಗು ಜಿಲ್ಲೆಯಲ್ಲಿ ಮತದಾನ ದಿನವಾಗಿದ್ದು, ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 135(ಬಿ) ರಡಿ ಮತ್ತು ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ, 1963 ಕಲಂ 3 (ಎ) ಹಾಗೂ ನೆಗೋಷೇಬಲ್ ಇನ್ಸ್ಟ್ರೂಮೆಂಟ್ಸ್ ಆಕ್ಟ್ (Negotiable Instruments Act),1881 ಸೆಕ್ಷನ್ 25 ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ಸಂಸ್ಥೆಯವರು ಅನುವು ಮಾಡಿ ಕೊಡುವಂತೆ ಕೊಡಗು ಉಪವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...