ಬೆಂಗಳೂರು: ಭಾರತದಲ್ಲಿಯೂ ಕೊರೋನಾ ಒಮಿಕ್ರಾನ್ ರೂಪಾಂತರ ತಳಿ ಬಿಎಫ್.7 ಆತಂಕ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಗುವುದು.
ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿಯೂ ಇಂದು ಮಾಕ್ ಡ್ರಿಲ್ ನಡೆಸಲಾಗುವುದು. ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಐಸಿಯು, ಎನ್ಐಸಿಯು ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಪರಿಶೀಲನೆ ನಡೆಸಲಾಗುವುದು. ಕೊರೋನಾ ಸೋಂಕಿತರಿಗೆ ಚಿಕಿತ್ಸೆಯ ಬಗ್ಗೆ ಸಿದ್ಧತೆಯ ಕುರಿತಾಗಿ ಪರಿಶೀಲನೆ ನಡೆಸಲಾಗುತ್ತದೆ. ಆಕ್ಸಿಜನ್ ಪ್ಲಾಂಟ್ ಗಳ ಕಾರ್ಯನಿರ್ವಹಣೆ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಇದಲ್ಲದೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆ ಮೇರೆಗೆ ಪರಿಶೀಲನೆ ನಡೆಸಲಾಗುತ್ತದೆ.
ರೂಪಾಂತರ ತಳಿ ಬಿಎಫ್.7 ಆತಂಕ ಹಿನ್ನೆಲೆಯಲ್ಲಿ ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗಿದ್ದು, ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಗುವುದು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸಿ.ವಿ. ರಾಮನ್ ನಗರ ಆಸ್ಪತ್ರೆ, ಇಎಸ್ಐ ಆಸ್ಪತ್ರೆ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದ್ದು, ಎಲ್ಲಾ ವಿಭಾಗಗಳ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎನ್ನಲಾಗಿದೆ.