ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿರುವ ಭವಾನಿಪುರ ಬೈ ಎಲೆಕ್ಷನ್ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಗಿದೆ.
ಸೆ. 30 ರಂದು ಮತದಾನದ ಸಂದರ್ಭದಲ್ಲಿ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಮತ ಎಣಿಕೆಗೆ ಮೂರು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ಈ ಹಿಂದೆ ಎರಡು ಬಾರಿ ಮಮತಾ ಅವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡಿದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಮಮತಾ ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಪಕ್ಷ ಟಿಎಂಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಮಮತಾ ಅವರಿಗೆ ಸ್ಥಾನ ಉಳಿಸಿಕೊಳ್ಳಲು ಈ ಉಪಚುನಾವಣೆ ಗೆಲುವು ಅನಿವಾರ್ಯವಾಗಿದೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಮಮತಾ ಪರಾಭವಗೊಂಡರೆ ಸಿಎಂ ಸ್ಥಾನ ಉಳಿಸಿಕೊಳ್ಳಲು ಬೇರೆ ಲೆಕ್ಕಾಚಾರಗಳು ನಡೆದಿವೆ.