
ಕೊಲ್ಕೊತ್ತಾ: ದೇಶದ ಗಮನ ಸೆಳೆದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ.
ಅವರು 2800 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮಬಂಗಾಳದ 2 ವಿಧಾನಸಭೆ ಮತ್ತು 1 ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರಗಳಲ್ಲಿಯೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಭವಾನಿಪುರದಲ್ಲಿ 2800, ಶಾಮಸರ್ ಗಂಜ್ ನಲ್ಲಿ 500 ಮತಗಳ ಅಂತರದಿಂದ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ. ಜಂಗಿಪೂರ್ ಲೋಕಸಭೆ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ 2,500 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.