alex Certify ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಕಿರುತೆರೆ ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಕಿರುತೆರೆ ನಟ

ಕಿರುತೆರೆ ನಟರೊಬ್ಬರು ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ.

‘ಬಾಬಿ ಜಿ ಘರ್ ಪರ್ ಹೇ’ ಹಾಸ್ಯ ಧಾರಾವಾಹಿಯ ಖ್ಯಾತ ನಟ 41 ವರ್ಷದ ದೀಪೇಶ್ ಭಾನ್ ಮೃತಪಟ್ಟವರಾಗಿದ್ದು, ಇವರು ʼಎಫ್ಐಆರ್ʼ, ʼತಾರಕ್ ಮೆಹತಾ ಕಾ ಉಲ್ಟಾ ಚಶ್ಮಾ’ ಸೇರಿದಂತೆ ಹಲವು ಧಾರವಾಹಿಗಳಲ್ಲೂ ನಟಿಸಿದ್ದರು.

ಶನಿವಾರ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಮುಂಬೈನಲ್ಲಿ ಕ್ರಿಕೆಟ್ ಆಡುವಾಗ ದೀಪೇಶ್ ಭಾನ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ದೀಪೇಶ್ ಭಾನ್ ನಿಧನಕ್ಕೆ ಕಿರುತೆರೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...