
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಭದ್ರಾ ಹಿನ್ನೀರಿನಲ್ಲಿ ಮೂವರು ನೀರು ಪಾಲಾಗಿದ್ದಾರೆ.
ಅಫ್ದಾಖಾನ್, ಆದೀಲ್, ಸಾಜಿದ್ ನೀರು ಪಾಲಾದವರು ಎಂದು ಹೇಳಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದವರು ನಾಪತ್ತೆಯಾಗಿದ್ದಾರೆ. ನೆಟ್ವರ್ಕ್ ಇಲ್ಲದೆ ಮೂವರು ಯುವಕರು ಸಂಪರ್ಕಕ್ಕೆ ಸಿಗುತ್ತಿಲ್ಲ. ಎನ್.ಆರ್. ಪುರ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.