alex Certify ಎರಡು ಬೆಳೆಗೆ ನೀರು, ರೈತರ ಮೊಗದಲ್ಲಿ ಮಂದಹಾಸ: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಲ್ಲಿಕಾರ್ಜುನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೆಳೆಗೆ ನೀರು, ರೈತರ ಮೊಗದಲ್ಲಿ ಮಂದಹಾಸ: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಲ್ಲಿಕಾರ್ಜುನ್

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಅವರು ಇಂದು ಬಿ.ಆರ್.ಪಿ.ಯಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮವಾಗಿ ರೈತರಲ್ಲಿ ಆತಂಕದ ಛಾಯೆ ಮೂಡಿತ್ತು. ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕು ರೈತರ ನೆಮ್ಮದಿಯ ಬದಿಕಿಗೆ ಆಸರೆಯಾಗಲೆಂದು ಎಂದು ಆಶಿಸಿದರು.

ಈ ಜಲಾಶಯದ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಅಧಿಕಾರಿಗಳು, ಇತರರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...