ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜ. 1 ರ ರಾತ್ರಿಯಿಂದ ಭದ್ರಾ ಎಡದಂಡೆ ನಾಲೆ ಹಾಗೂ ಜ. 3 ರ ರಾತ್ರಿಯಿಂದ ಬಲದಂಡೆ ನಾಲೆಗಳಿಗೆ ನೀರು ಹರಿಸಲಾಗುವುದು.
ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ರೈತ ಮುಖಂಡರು, ಅಚ್ಚುಕಟ್ಟು ರೈತರು ಹಾಗೂ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ, ಜ.1 ರ ರಾತ್ರಿಯಿಂದ ಎಡದಂಡೆ ನಾಲೆಗೆ ಹಾಗೂ ಜ.3 ರ ರಾತ್ರಿಯಿಂದ ಭದ್ರಾ ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಭ.ಯೋ.ನೀ.ಸ.ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿರುತ್ತಾರೆ.