alex Certify ಒಳಹರಿವು ಹೆಚ್ಚಿದ ಹಿನ್ನಲೆ ಭದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರು ಹೊರಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳಹರಿವು ಹೆಚ್ಚಿದ ಹಿನ್ನಲೆ ಭದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರು ಹೊರಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ.

ಯಾವುದೇ ಸಂದರ್ಭದಲ್ಲಿ ಡ್ಯಾಂ ನಿಂದ ನೀರು ಬಿಡುವ ಸಾಧ್ಯತೆ ಇದೆ. ಎಚ್ಚರದಿಂದ ಇರುವಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ. ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ, ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ದಿನಾಂಕ:26.07.2024 ರಂದು ಜಲಾಶಯದ ನೀರಿನ ಮಟ್ಟ 174 ಆಡಿ 3 ಇಂಚುಗಳಿಗೆ ತಲುಪಿರುತ್ತದೆ. ಹರಿದು ಬರುವ ಒಳಹರಿವಿನ ಪ್ರಮಾಣ 35000-40000 ಕ್ಯೂಸೆಕ್ಸ್ ಇದ್ದು. ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟಕ್ಕೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವವಿದೆ.

ಆಣೆಕಟ್ಟು ಸುರಕ್ಷತೆಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳ ಹರಿವಿನ ಪ್ರಮಾಣಕ್ಕೆ ಅನುಗುಣವಾಗಿ Spill Way Gate ಮುಖಾಂತರ ನದಿಗೆ ಬಿಡಲಾಗುವುದು. ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ಈ ಮೂಲಕ ಕೋರಲಾಗಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...