ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಬಜೆಟ್ ನಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಆಗಿರುವುದಾಗಿ ತಿಳಿಸಿದ್ದಾರೆ. ಗೋವಿಂದ ಕಾರಜೋಳ ಅವರ ಮಾತನ್ನು ಒಪ್ಪದ ಸಿದ್ದರಾಮಯ್ಯ ಆದೇಶ ತೋರಿಸಿ ಎಂದು ಸವಾಲು ಹಾಕಿದ್ದಾರೆ.
ತಕ್ಷಣ ಕೇಳಿದರೆ ಹೇಗೆ ಕೊಡಲಿ, ಉತ್ತರ ನೀಡುವಾಗ ಕೊಡುತ್ತೇವೆ. ಆದೇಶ ಕಾಫಿ ತಂದು ತೋರಿಸುತ್ತೇವೆ ಎಂದು ಕಾರಜೋಳ ತಿಳಿಸಿದ್ದು, ಮೇಕೆದಾಟು ಯೋಜನೆಯನ್ನು ನಾವೇ ಪೂರ್ಣಗೊಳಿಸುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಮುಗಿದ ಕೂಡಲೇ ಯೋಜನೆ ಜಾರಿಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.