ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 10.30 ರ ಸುಮಾರಿಗೆ ತುಂಬಿ ಹರಿಯುತ್ತಿದ್ದ ಭದ್ರಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಸಮನೆ ಹನುಮಂತನಗರ ನಿವಾಸಿ ರಾಜು(34) ಆತ್ಮಹತ್ಯೆ ಮಾಡಿಕೊಂಡವರು. ಕೆಇಬಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ರಾಜು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ, ಹಳೆ ನಗರ ಠಾಣೆ ಪೋಲೀಸರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.