ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದಲ್ಲಿ ಮಚ್ಚಿನಿಂದ ಥಳಿಸಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
ಶಾಂತಕುಮಾರ್(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆರೋಪಿ ಸುಮಾರು 40 ವರ್ಷ ವಯಸ್ಸಿನ ಲೇಪಾಕ್ಷಿ ಮತ್ತು ಇತರ ಇಬ್ಬರು ಕೃತ್ಯವೆಸಗಿದ್ದಾರೆ.
ಆರೋಪಿಯು ಮೃತನ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಅವರ ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ವಿಚಾರವಾಗಿ ನಡೆದ ಜಗಳದ ವೇಳೆ ಕೊಲೆ ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಶರು ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.