ಮೈಸೂರು: ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶೀಘ್ರವೇ ವಿದ್ಯುತ್ ದರ ಇಳಿಕೆಯಾಗಲಿದೆ.
ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಸೂರ್ಯಪಥ್ ಯೋಜನೆಯ ಅನುಷ್ಠಾನ, ಸೋಲಾರ್ ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ ವಾಹನಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಮುಂದು ವಿದ್ಯುತ್ ದರ ಇಳಿಕೆಯಾಗಲಿದೆ ಎಂದರು.
ಹಿಂದೆ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಮಾಡುವುದು ಕಷ್ಟವಾಗುತ್ತಿತ್ತು. ಈಗ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಬೇಡಿಕೆಯಷ್ಟು ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಆದ್ಯತೆ ನೀಡಲಾಗಿದೆ. ಹೆಚ್ಚು ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿದ್ಯುತ್ ದರ ಕೂಡ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ಸೌರ ಗೃಹ ವಿದ್ಯುತ ಯೋಜನೆಯಡಿ, ಸಬ್ಸಿಡಿ ದರದಲ್ಲಿ ಮೇಲ್ಛಾವಣಿಯಲ್ಲಿ ಸೋಲಾರ್ ಅಳವಡಿಕೆ ಹಾಗೂ ಪವರ್ ಗ್ರಿಡ್ ವಾಹನಗಳನ್ನು ಉದ್ಘಾಟಿಸಲಾಯಿತು. ಇಂಧನ ಸಚಿವ ವಿ. ಸುನಿಲ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕ ಎಸ್.ಎ. ರಾಮದಾಸ್ ಉಪಸ್ಥಿತರಿದ್ದರು.