ಬೆಂಗಳೂರು: ಯಡಿಯೂರಪ್ಪ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ‘ಭಾಗ್ಯಲಕ್ಷ್ಮಿ’ ಯೋಜನೆ ಮುಂದುವರೆಸಲಾಗಿದೆ. ಯೋಜನೆಗೆ ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ’ ಯೋಜನೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ’ಯಡಿ 3,74,999 ಫಲಾನುಭವಿಗಳಿಗೆ 11,249.97 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಸದ್ಯಕ್ಕೆ 1.21 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಅರ್ಜಿದಾರರಿಗೆ 50,000 ರೂ. ಬಾಂಡ್ ನೀಡಲಾಗುತ್ತಿತ್ತು. ತಾಂತ್ರಿಕ ಕಾರಣದಿಂದ ಇದನ್ನು ಬದಲಾಯಿಸಿ ವಾರ್ಷಿಕ 3000 ರೂ.ನಂತೆ 15 ವರ್ಷ ಆಯಾ ಫಲಾನುಭವಿಗಳ ಪೋಸ್ಟ್ ಆಫೀಸ್ ಖಾತೆಗೆ ಜಮೆ ಮಾಡಲಾಗುತ್ತದೆ. ಉಳಿದಂತೆ ಷರತ್ತುಗಳು ಯಥಾಸ್ಥಿತಿಯಲ್ಲಿ ಮುಂದುವರೆದಿವೆ ಎಂದು ಮಾಹಿತಿ ನೀಡಿದ್ದಾರೆ.