ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.
ನವೆಂಬರ್ 15 ರಂದು ಬಹುನಿರೀಕ್ಷಿತ ‘ಭೈರತಿ ರಣಗಲ್’ ಬಿಡುಗಡೆಯಾಗಲಿದೆ. ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿರುವ ಚಿತ್ರವನ್ನು ನರ್ತನ್ ನಿರ್ದೇಶಿಸಿದ್ದಾರೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಬೈರತಿ ರಣಗಲ್’ ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ.
ಇದೇ ತಿಂಗಳು ಸಿನಿಮಾ ಬಿಡುಗಡೆಯಾಗಬೇಕಿತ್ತಾದರೂ, ಕಾರಣಾಂತರದಿಂದ ನವೆಂಬರ್ ನಲ್ಲಿ ತೆರೆ ಕಾಣಲಿದೆ. ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ‘ಭೈರತಿ ರಣಗಲ್’ ಮೂಡಿ ಬಂದಿದ್ದು, ಚಿತ್ರ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಲ್ಲಿದ್ದಾರೆ.