ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿದೆ.
ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದ ಘಟಾನುಘಟಿ ನಾಯಕರಿಗೆ ಶಾಕ್ ನೀಡಿದೆ. ಸಂಗನೇರ್ ವಿಧಾನಸಭೆ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ದಿಯಾ ಕುಮಾರಿ, ಪ್ರೇಮ್ ಚಂದ್ ಭೈರ್ವಾ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ. ವಾಸುದೇವ್ ದೇವನಾನಿ ಅವರನ್ನು ವಿಧಾನಸಭೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಇತ್ತು. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ಮೇಘವಾಲ್, ಅಶ್ವಿನಿ ವೈಷ್ಣವ್, ದಿಯಾ ಕುಮಾರಿ, ಬಾಲಕನಾಥ, ಬಿಜೆಪಿ ರಾಜ್ಯಾಧ್ಯಕ್ಷ ಸಿ.ಪಿ. ಜೋಶಿ, ಬಿಜೆಪಿ ಹಿರಿಯ ನಾಯಕ ಓಂ ಮಾಥೂರ್ ಅವರು ಸ್ಪರ್ಧೆಯಲ್ಲಿದ್ದರು.