alex Certify ಇಂದು, ನಾಳೆ ಭಾರತ್ ಬಂದ್ ಗೆ ಕರೆ: ದೇಶಾದ್ಯಂತ ಮುಷ್ಕರ: ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು, ನಾಳೆ ಭಾರತ್ ಬಂದ್ ಗೆ ಕರೆ: ದೇಶಾದ್ಯಂತ ಮುಷ್ಕರ: ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ. ಇಂದು ಮತ್ತು ನಾಳೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.

ರೈಲ್ವೇ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ಕೂಡ ಮುಷ್ಕರವನ್ನು ಬೆಂಬಲಿಸಿವೆ. ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ ಮತ್ತು ವಿಮೆಯಂತಹ ವಿವಿಧ ಕ್ಷೇತ್ರಗಳ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಅನೇಕ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಮುಷ್ಕರದಿಂದ ಬ್ಯಾಂಕ್‌ ನಲ್ಲಿ ಕೆಲಸವು ಸೀಮಿತ ಪ್ರಮಾಣದಲ್ಲಿರಲಿದ್ದು, ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಉಳಿದಂತೆ ಮುಷ್ಕರದ ನಡುವೆ ಎಂದಿನಂತೆ ಕಚೇರಿ ಕೆಲಸಗಳು ನಡೆಯಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...