ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ.
ಭಾರತ ಬಂದ್ ಗೆ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಬಸ್, ಟ್ಯಾಕ್ಸಿ, ಆಟೋ ಸೇವೆಗಳು ಮುಂದುವರೆಯಲಿವೆ. ಅದೇ ರೀತಿ ಮೆಟ್ರೋ, ರೈಲು ಸಂಚಾರ ಇರುತ್ತದೆ. ಶಾಲಾ-ಕಾಲೇಜುಗಳು ಇರಲಿವೆ. ಬಂದ್, ಪ್ರತಿಭಟನೆ ಬಿಸಿ ತಟ್ಟುತ್ತಿದ್ದಂತೆಯೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ.
ರೈತರು ಹೆದ್ದಾರಿಗಳನ್ನು ಬಂದ್ ಮಾಡುವುದರಿಂದ ಹಾಗೂ ಬೃಹತ್ ಪ್ರತಿಭಟನೆ ನಡೆಸಲಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ನೀಡಿರುವುದರಿಂದ ಹೋಟೆಲ್ ಸೇರಿ ಸೇರಿದಂತೆ ವಿವಿಧ ವಾಣಿಜ್ಯ, ವಹಿವಾಟು ಉದ್ಯಮ ನಡೆಯಲಿವೆ.
ಪೆಟ್ರೋಲ್ ಬಂಕ್, ಮೆಡಿಕಲ್, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಜೊತೆಗೆ ಬಹುತೇಕ ಸೇವೆ ಇರಲಿವೆ. ಕೆಲವು ವಿವಿ ಪರೀಕ್ಷೆ ಮುಂದೂಡಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಪದವಿ, ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.