ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಕೈಗೊಂಡಿರುವ ಹೋರಾಟ ನಾಲ್ಕು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಇಂದು ಭಾರತ್ ಬಂದ್ ಗೆ ಕರೆ ನೀಡಿದೆ.
ದೇಶಾದ್ಯಂತ ಬಂದ್ ಗೆ ಕರೆ ನೀಡಲಾಗಿದ್ದು, ಜೊತೆಗೆ ಪ್ರತಿಭಟನೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಬಂದ್ ಬದಲಿಗೆ ಪ್ರತಿಭಟನೆ ನಡೆಸಲು ರೈತ ನಾಯಕರು ತೀರ್ಮಾನಿಸಿದ್ದಾರೆ. ರಾಜ್ಯದ ಹಲವೆಡೆ ತಿದ್ದುಪಡಿ ಪ್ರತಿಗಳನ್ನು ಹರಿದು ಹಾಕುವುದು, ಶವಯಾತ್ರೆ ಸೇರಿದಂತೆ ವಿವಿಧ ರೀತಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ. ರೈತರ ಹೋರಾಟಕ್ಕೆ ಅನೇಕ ಸಂಘಟನೆಗಳು ಸಾಥ್ ನೀಡಿವೆ.
ದೇಶದ ಅನೇಕ ಕಡೆ ಬಂದ್ ಯಶಸ್ವಿಯಾಗಲಿದೆ. ಬೃಹತ್ ಪ್ರತಿಭಟನೆಗಳು ಕೂಡ ನಡೆಯುವುದರಿಂದ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ. ಬಂದ್ ಯಶಸ್ವಿಯಾದರೆ ಹಲವು ಸೇವೆಯಲ್ಲಿ ವ್ಯತ್ಯಯವಾಗಬಹುದು.