ನವದೆಹಲಿ: ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ರೈತರು ಕೈಗೊಂಡಿರುವ ಹೋರಾಟ ಮುಂದುವರೆದಿದ್ದು, ಡಿಸೆಂಬರ್ 8 ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ.
ಕಾಂಗ್ರೆಸ್ ಸೇರಿದಂತೆ 15 ಕ್ಕೂ ಹೆಚ್ಚು ಪಕ್ಷಗಳು ರೈತರ ಹೋರಾಟಕ್ಕೆ ಸಾಥ್ ನೀಡಿವೆ. ಕಾರ್ಮಿಕ ಸಂಘಟನೆಗಳು, ಸಾರಿಗೆ ಸಂಘಟನೆಗಳು, ಬ್ಯಾಂಕ್ ನೌಕರರು ಕೂಡ ಬೆಂಬಲ ಸೂಚಿಸಿದ್ದಾರೆ. ರಾಜ್ಯದ ರೈತರು, ಕಬ್ಬು ಬೆಳೆಗಾರರು, ಕೆಲವು ಕನ್ನಡ ಸಂಘಟನೆಗಳು ಬೆಂಬಲ ನೀಡಿವೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ, ತೆಲಂಗಾಣ ರಾಷ್ಟ್ರ ಸಮಿತಿ, ಡಿಎಂಕೆ, ಎನ್.ಸಿ.ಪಿ. ಸೇರಿದಂತೆ 15 ಕ್ಕೂ ಹೆಚ್ಚು ಪಕ್ಷಗಳು ಬೆಂಬಲ ನೀಡಿವೆ. ನಾಳೆ ದೇಶಾದ್ಯಂತ ಬಂದ್ ಮಾಡಲಿದ್ದು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತ ಮುಖಂಡರು ಮುಂದಾಗಿದ್ದಾರೆ. ಸಾರಿಗೆ ಸಂಘಟನೆಗಳು, ಬ್ಯಾಂಕ್ ನೌಕರರು ರಾಜಕೀಯ ಪಕ್ಷಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ಭಾರತ್ ಬಂದ್ ಯಶಸ್ವಿಯಾಗಲಿದೆ ಎಂದು ಹೇಳಲಾಗಿದೆ.