ಹೈದರಾಬಾದ್: ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಕೊವ್ಯಾಕ್ಸಿನ್ ಪರಿಣಾಮಕಾರಿಯಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ.
ಕೊವ್ಯಾಕ್ಸಿನ್ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಬುಧವಾರ ಹೇಳಿಕೆ ನೀಡಿದ್ದು, ಕೊರೋನಾ ತಡೆಯುವಲ್ಲಿ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿದೆ. ಇದು ಬ್ರಿಟನ್ ನಲ್ಲಿ ಕಾಣಿಸಿಕೊಂಡ ರೂಪಾಂತರ ಕೊರೋನಾ ವೈರಸ್ ಅನ್ನು ಕೂಡ ನಿಷ್ಕ್ರಿಯಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಲಾಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಕೂಡ ಈ ಬಗ್ಗೆ ಮಾಹಿತಿ ನೀಡಿ, ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಿರುವ ರೋಗ ನಿರೋಧಕ ಶಕ್ತಿಯನ್ನು ಕೊವ್ಯಾಕ್ಸಿನ್ ವೃದ್ಧಿಸುತ್ತದೆ. ಇದು ಕೊರೋನಾ, ರೂಪಾಂತರಿ ಕೊರೋನಾಕ್ಕೆ ಪರಿಣಾಮಕಾರಿಯಾಗಿದೆ ಎಂದು ಹೇಳಿದೆ.
ಭಾರತದಲ್ಲಿ ಆರೋಗ್ಯ ಕ್ಷೇತ್ರದ ಮುಂಚೂಣಿ ಕಾರ್ಯಕರ್ತರಿಗೆ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ.