alex Certify ರೂಪಾಂತರಿ ಕೊರೋನಾ ವೈರಸ್ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೂಪಾಂತರಿ ಕೊರೋನಾ ವೈರಸ್ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ಹೈದರಾಬಾದ್: ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಕೊವ್ಯಾಕ್ಸಿನ್ ಪರಿಣಾಮಕಾರಿಯಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ.

ಕೊವ್ಯಾಕ್ಸಿನ್ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಬುಧವಾರ ಹೇಳಿಕೆ ನೀಡಿದ್ದು, ಕೊರೋನಾ ತಡೆಯುವಲ್ಲಿ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿದೆ. ಇದು ಬ್ರಿಟನ್ ನಲ್ಲಿ ಕಾಣಿಸಿಕೊಂಡ ರೂಪಾಂತರ ಕೊರೋನಾ ವೈರಸ್ ಅನ್ನು ಕೂಡ ನಿಷ್ಕ್ರಿಯಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಕೂಡ ಈ ಬಗ್ಗೆ ಮಾಹಿತಿ ನೀಡಿ, ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಿರುವ ರೋಗ ನಿರೋಧಕ ಶಕ್ತಿಯನ್ನು ಕೊವ್ಯಾಕ್ಸಿನ್ ವೃದ್ಧಿಸುತ್ತದೆ. ಇದು ಕೊರೋನಾ, ರೂಪಾಂತರಿ ಕೊರೋನಾಕ್ಕೆ ಪರಿಣಾಮಕಾರಿಯಾಗಿದೆ ಎಂದು ಹೇಳಿದೆ.

ಭಾರತದಲ್ಲಿ ಆರೋಗ್ಯ ಕ್ಷೇತ್ರದ ಮುಂಚೂಣಿ ಕಾರ್ಯಕರ್ತರಿಗೆ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...