alex Certify ಬಳ್ಳಾರಿಯಲ್ಲಿಂದು ಭಾರತ್ ಜೋಡೋ ಯಾತ್ರೆ: ಗಣಿ ನಾಡಲ್ಲಿ ಕಾಂಗ್ರೆಸ್ ರಣಕಹಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿಯಲ್ಲಿಂದು ಭಾರತ್ ಜೋಡೋ ಯಾತ್ರೆ: ಗಣಿ ನಾಡಲ್ಲಿ ಕಾಂಗ್ರೆಸ್ ರಣಕಹಳೆ

ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮುಂದುವರೆಯಲಿದೆ.

ಹಲಕುಂದಿ ಮಠದಿಂದ ಯಾತ್ರೆ ಆರಂಭವಾಗಲಿದೆ. ರಾಹುಲ್ ಗಾಂಧಿ ಅವರು ಸುಮಾರು 8.8 ಕಿಲೋಮೀಟರ್ ಹೆಜ್ಜೆ ಹಾಕಲಿದ್ದಾರೆ. ಪಾದಯಾತ್ರೆ ಬೆಳಗ್ಗೆ 9.30 ಕ್ಕೆ ಕಮ್ಮ ಭವನ ತಲುಪಲಿದೆ. ಮಧ್ಯಾಹ್ನ 1:30ರ ವರೆಗೆ ಕಮ್ಮ ಭವನದ ಬಳಿ ರಾಹುಲ್ ಗಾಂಧಿ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಮುನ್ಸಿಪಲ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ, ರಾತ್ರಿ ಸಂಗನಕಲ್ಲು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 1 ಗಂಟೆಗೆ ರಾಹುಲ್ ಗಾಂಧಿ ಸಮಾವೇಶ ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಭಾಘೇಲ್ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಐಕ್ಯತಾ ಯಾತ್ರೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...