ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಬೆಳ್ಳಂಬೆಳಗ್ಗೆ ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಮೆಟ್ರೋ, ಬಸ್ ಸೇವೆ ಸೇರಿದಂತೆ ವಾಹನಗಳ ಸಂಚಾರ ಆರಂಭವಾಗಿದೆ. ಬೆಂಗಳೂರಿನ ಸುಮನಹಳ್ಳಿ, ಕೆಆರ್ ಪುರಂನಿಂದ ರ್ಯಾಲಿ ನಡೆಸಲಿದ್ದು, ಸುಮಾರು 8 -10 ಸಾವಿರ ರೈತರು ಭಾಗವಹಿಸಲಿದ್ದಾರೆ. ಜಿಲ್ಲಾ, ತಾಲೂಕು ಕೇಂದ್ರಗಳು ಸೇರಿದಂತೆ ವಿವಿಧೆಡೆ ಪ್ರತಿಭಟನೆ ಕೈಗೊಳ್ಳಲಾಗಿದೆ.
ರೈತರ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ. ಕೋವಿಡ್ ನಂತರ ಈಗಷ್ಟೇ ವ್ಯಾಪಾರ ವಹಿವಾಟು ಚೇತರಿಕೆ ಕಾಣುತ್ತಿರುವುದರಿಂದ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಶಾಲೆ ಕಾಲೇಜು ಸೇರಿ ಬಹುತೇಕ ಚಟುವಟಿಕೆ ಮುಂದುವರೆಯಲಿವೆ. ಬಂದ್ ಗೆ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲವೆನ್ನಲಾಗಿದೆ.