ಚಿತ್ರದುರ್ಗ: ರಾಜ್ಯದಲ್ಲಿ ಪೊಲೀಸರಿಗೆ ರಕ್ಷಣೆ ನೀಡಬೇಕಾದ ಸ್ಥಿತಿ ಇದೆ. ಶಾಸಕರನ್ನೆಲ್ಲ ತೋಳಗಳಂತೆ ಹಣ ಕೀಳಲು ಬಿಡಲಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಭಾಸ್ಕರ್ ರಾವ್, ಪೋಸ್ಟಿಂಗ್ ಗಾಗಿ ಕೋಟಿ ಕೋಟಿ ಲಂಚ ಕೊಡಬೇಕಾಗಿದೆ. ಶಾಸಕರನ್ನು ಹಣ ಕೀಳಲು ಬಿಡಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರನ್ನೇ ಸರ್ಕಾರ ಭಕ್ಷಕರನ್ನಾಗಿ, ಭಿಕಾರಿಗಳನ್ನಾಗಿ ಮಾಡಿದೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ. ಬೇರೆ ಇಲಾಖೆಯಲ್ಲಿ ಗುತ್ತಿಗೆ, ಟೆಂಡರ್, ಪರ್ಸಂಟೇಜ್ ನಡೆಯುತ್ತದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತದೆ. ಇದರಿಂದಾಗಿ ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲವಾಗಿದೆ. ಪೊಲೀಸರಿಗೆ ರಕ್ಷಣೆ ಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಯಾದಗಿರಿ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ವಿಚಾರವಾಗಿ ಪ್ರತಿಕ್ರಿಯಿಸಿದ ಭಾಸ್ಕರ್ ರಾವ್, ಪ್ರಾಮಾಣಿಕವಾಗಿದ್ದಿದ್ದಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.