ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಐಪಿಎಸ್ ಅಧಿಕಾರಿ ಭಾಸ್ಕರರಾವ್ ನಿವೃತ್ತಿ ಕೋರಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಸ್ತುತ ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಭಾಸ್ಕರರಾವ್ ಅವರು ನಿವೃತ್ತಿ ಕೋರಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ, ಹಲವು ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ, ಕೆಎಸ್ಆರ್ಟಿಸಿ ಭದ್ರತಾ ವಿಭಾಗದ ನಿರ್ದೇಶಕರು, ಸಾರಿಗೆ ಇಲಾಖೆ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಭಾಸ್ಕರರಾವ್ ಸ್ವಯಂನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದು, ರಾಜಕೀಯಕ್ಕೆ ಸೇರಬಹುದೆಂದು ಹೇಳಲಾಗುತ್ತಿದೆ.